ಲಾಭದಾಯಕ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 205 ಪಾಯಿಂಟ್‌ಗಳ ಕುಸಿತ ಕಂಡಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 372.15 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 205.20 ಪಾಯಿಂಟ್‌ಗಳ ಕುಸಿತ ಕಂಡು 19,785.34 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಆರಂಭಿಕ ವಹಿವಾಟಿನಲ್ಲಿ 70.10 ಪಾಯಿಂಟ್‌ಗಳ ಕುಸಿತ ಕಂಡು 5,939.90 ಅಂಕಗಳಿಗೆ ತಲುಪಿದೆ.
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಹೂಡಿಕೆದಾರರು ಶೇರುಗಳ ಮಾರಾಟದಲ್ಲಿ ತೊಡಗಿದ್ದರಿಂದ, ಶೇರುಪೇಟೆ ಸೂಚ್ಯಂಕ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಅದನ್ನು ಹೊರತುಪಡಿಸಿ, 2ಜಿ ಸ್ಪೆಕ್ಟ್ರ ಹಂಚಿಕೆ ವಿವಾದ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಸಿರುವುದು ಕೂಡಾ ವಹಿವಾಟು ಕುಸಿತಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ ಶೇ.1.23ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.0.22ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.