ದೇಶಿಯ ಶೇರುಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ತೈಲ ಮತ್ತು ಅನಿಲ, ಉಕ್ಕು ಮತ್ತು ಬ್ಯಾಂಕಿಂಗ್ ಕ್ಷೇತ್ರದ ಶೇರುಗಳು ಚೇತರಿಕೆ ಕಂಡಿದ್ದರಿಂದ ಶೇರುಸೂಚ್ಯಂಕ 68 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 265.75 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 68.29 ಪಾಯಿಂಟ್‌ಗಳ ಏರಿಕೆ ಕಂಡು 19,760.13 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 19.35 ಪಾಯಿಂಟ್‌ಗಳ ಏರಿಕೆ ಕಂಡು 5,954.10 ಅಂಕಗಳಿಗೆ ತಲುಪಿದೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.92 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.71 ರಷ್ಟು ಇಳಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.1.27ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.