ಬ್ಯಾಂಕ್‌ಗಳ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಲಂಚ ಹಗರಣ ಬಹಿರಂಗವಾದ ಹಿನ್ನೆಲೆಯಲ್ಲಿ, ಶೇರುಪೇಟೆಯಲ್ಲಿ ಶೇರುಗಳ ಖರೀದಿಯಲ್ಲಿ ಭಾರಿ ಇಳಿಕೆಯಾಗಿದ್ದರಿಂದ ವಹಿವಾಟಿನ ಅಂತ್ಯಕ್ಕೆ ಸೂಚ್ಯಂಕ 141 ಪಾಯಿಂಟ್‌ಗಳ ಇಳಿಕೆ ಕಂಡಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಶೇ.0.73ರಷ್ಟು ಕುಸಿತ ಕಂಡು 19,459.85 ಅಂಕಗಳಿಗೆ ತಲುಪಿತ್ತು. ಬಿಎಸ್‌ಇ-30 ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ, 141.69 ಪಾಯಿಂಟ್‌ಗಳ ಕುಸಿತ ಕಂಡು 19,318.16 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಶೇ,0.73ರಷ್ಟು ಇಳಿಕೆ ಕಂಡು 5,822.85 ಅಂಕಗಳಿಗೆ ತಲುಪಿದೆ.
ವಹಿವಾಟಿನ ಮುಕ್ತಾಯಕ್ಕೆ ಬಿಎಸ್‌ಇ ಮಿಡ್‌ಕ್ಯಾಪ್ ಸೂಚ್ಯಂಕ ಶೇ.1.89ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಬಿಎಸ್‌ಇ ಸ್ಮಾಲ್‌ಕ್ಯಾಪ್ ಸೂಚ್ಯಂಕ ಕೂಡಾ ವಹಿವಾಟಿನ ಮುಕ್ತಾಯಕ್ಕೆ ಶೇ.1.87ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.