ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ರಿಲಯನ್ಸ್, ಬ್ಯಾಂಕಿಂಗ್ ಶೇರುಗಳ ವಹಿವಾಟಿನಲ್ಲಿ ಚೇತರಿಕೆ (Sensex | Reliance Industries | Ranbaxy lab | Global trend)
ಸತತ ನಾಲ್ಕು ದಿನಗಳ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 268 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ 820 ಪಾಯಿಂಟ್‌ಗಳ ಕುಸಿತ ಕಂಡ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯದ ಹಂತದಲ್ಲಿ ರಿಲಯನ್ಸ್ ಇಂಡಸ್ಚ್ರೀಸ್ ಮತ್ತು ರಾನ್‌ಬಕ್ಸಿ ಶೇರುಗಳ ಮಾರಾಟದಲ್ಲಿ ಹೆಚ್ಚಳವಾಗಿದ್ದರಿಂದ 268.49 ಪಾಯಿಂಟ್‌ಗಳ ಚೇತರಿಕೆ ಕಂಡು 19,405.10 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, ವಹಿವಾಟಿನ ಮುಕ್ತಾಯಕ್ಕೆ 78.05 ಪಾಯಿಂಟ್‌ಗಳ ಚೇತರಿಕೆ ಕಂಡು 5,830.00 ಅಂಕಗಳಿಗೆ ತಲುಪಿದೆ.
ಶೇರುಪೇಟೆಯಲ್ಲಿ ತೈಲ ಮತ್ತು ಅನಿಲ ಕ್ಷೇತ್ರ, ಐಸಿಐಸಿಐ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಬ್ಯಾಂಕ್ ಆಫ್ ಇಂಡಿಯಾ ಶೇರುಗಳು ಚೇತರಿಕೆ ಕಂಡಿವೆ.
ಎಲ್‌ಐಸಿ ಹೌಸಿಂಗ್ ಫೈನಾನ್ಸ್, ಡಿಬಿ ರಿಯಲ್ಟ್ ಮನಿ ಮ್ಯಾಟರ್ಸ್ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ..