ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ,ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 169 ಪಾಯಿಂಟ್‌ಗಳ ಕುಸಿತ ಕಂಡಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 268.49 ಪಾಯಿಂಟ್‌ಗಳ ಇಳಿಕೆ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 168.71 ಪಾಯಿಂಟ್‌ಗಳ ಕುಸಿತ ಕಂಡು 19,236.39 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಆರಂಭಿಕ ವಹಿವಾಟಿನಲ್ಲಿ, 56.10 ಪಾಯಿಂಟ್‌ಗಳ ಇಳಿಕೆ ಕಂಡು 5.773.90 ಅಂಕಗಳಿಗೆ ತಲುಪಿದೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.22 ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.55 ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಅಮೆರಿಕದ ಡೊ ಜೊನ್ಸ್ ಮಾರುಕಟ್ಟೆ ವಹಿವಾಟಿನ ಮುಕ್ತಾಯಕ್ಕೆ ಶೇ.0.36 ಪಾಯಿಂಟ್‌ಗಳ ಏರಿಕೆ ಕಂಡು ಅಂತ್ಯವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.