ಸೆನ್ಸೆಕ್ಸ್: ಜಿಡಿಪಿ ದರ ಚೇತರಿಕೆಯಿಂದಾಗಿ ಸೂಚ್ಯಂಕ ಏರಿಕೆ
ಮುಂಬೈ, ಮಂಗಳವಾರ, 30 ನವೆಂಬರ್ 2010( 17:47 IST )
ಎರಡನೇ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ದರ ಚೇತರಿಕೆ ಕಂಡ ಹಿನ್ನೆಲೆಯಲ್ಲಿ, ವಹಿವಾಟಿನ ಮುಕ್ತಾಯಕ್ಕೆ 116 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ದರ ಶೇ.8.9ಕ್ಕೆ ಏರಿಕೆ ಕಂಡಿದ್ದರಿಂದ, ಕುಸಿತದಿಂದ ಆರಂಭಗೊಂಡ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಏರಿಕೆ ಕಂಡು ಅಂತ್ಯವಾಗಿದೆ.
ಬಿಎಸ್‌ಇ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 116.15 ಪಾಯಿಂಟ್‌ಗಳ ಚೇತರಿಕೆ ಕಂಡು 19,521.25 ಪಾಯಿಂಟ್‌ಗಳ ಏರಿಕೆ ಕಂಡಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ 32.70 ಪಾಯಿಂಟ್‌ಗಳ ಏರಿಕೆ ಕಂಡು 5,862.70 ಅಂಕಗಳಿಗೆ ತಲುಪಿದೆ.
ಪಿಎಸ್‌ಯು, ಎಫ್‌ಎಂಸಿಜಿ, ಅಟೋ, ತಂತ್ರಜ್ಞಾನ , ಬ್ಯಾಂಕಿಂಗ್ ಕ್ಷೇತ್ರದ ಶೇರುಗಳು ವಹಿವಾಟಿನ ಮುಕ್ತಾಯಕ್ಕೆ ಚೇತರಿಕೆ ಕಂಡಿವೆ.
ತೈಲ ಮತ್ತು ಅನಿಲ, ರಿಲಯನ್ಸ್ ಇಂಡಸ್ಟ್ರೀಸ್ ಗೇಲ್ ಇಂಡಿಯಾ ಮತ್ತು ಬಿಪಿಸಿಎಲ್ ಶೇರುಗಳು ವಹಿವಾಟಿನಲ್ಲಿ ಏರಿಕೆ ಕಂಡಿವೆ.
ಬಿಎಸ್‌ಇ ಮಿಡ್‌ಕ್ಯಾಪ್ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.1.90 ಪಾಯಿಂಟ್‌ಗಳ ಏರಿಕೆ ಕಂಡು ಅಂತ್ಯಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಬಿಎಸ್‌ಇ ಸ್ಮಾಲ್‌ಕ್ಯಾಪ್ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.1.90 ಪಾಯಿಂಟ್‌ಗಳ ಏರಿಕೆ ಕಂಡು ಅಂತ್ಯಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.