ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್:ಶೇರು ಖರೀದಿಯ ಭರಾಟೆಯಿಂದ ಸೂಚ್ಯಂಕ ಚೇತರಿಕೆ (Stocks | Sensex | Nifty | BSE)
Bookmark and Share Feedback Print
 
ದೇಶಿಯ ಮಾರುಕಟ್ಟೆಯ ಚೇತರಿಕೆಯಿಂದಾಗಿ, ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 94 ಪಾಯಿಂಟ್‌ಗಳ ಏರಿಕೆ ಕಂಡಿದೆ ಎಂದು ಮಾರುಕ್ಟಟೆಯ ಮೂಲಗಳು ತಿಳಿಸಿವೆ.

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 116.15 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 93.81 ಪಾಯಿಂಟ್‌ಗಳ ಏರಿಕೆ ಕಂಡು 19,615.06 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ 25.90 ಪಾಯಿಂಟ್‌ಗಳ ಏರಿಕೆ ಕಂಡು 5,888.60 ಅಂಕಗಳಿಗೆ ತಲುಪಿದೆ.

ಸೆಪ್ಟೆಂಬರ್ 30ಕ್ಕೆ ಎರಡನೇ ತ್ರೈಮಾಸಿಕ ಅಂತ್ಯಗೊಂಡಂತೆ, ಜಿಡಿಪಿ ದರದಲ್ಲಿ ಹೆಚ್ಚಳವಾಗಿದ್ದರಿಂದ ಶೇರುಪೇಟೆಯಲ್ಲಿ ಹೂಡಿಕೆದಾರರು ಹೆಚ್ಚಿನ ಆಸಕ್ತಿ ಹೊಂದಿದ್ದಾರೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.54ರಷ್ಟು ಕುಸಿತ ಕಂಡಿದೆ.

ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.11ರಷ್ಟು ಕುಸಿತ ಕಂಡಿದೆ.

ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.42ರಷ್ಟು ಕುಸಿತ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶೇರುಪೇಟೆ, ಸೂಚ್ಯಂಕ, ನಿಫ್ಟಿ