ಬ್ಯಾಂಕಿಂಗ್, ರಿಯಲ್ಟಿ ಮತ್ತು ಉಕ್ಕು ಕ್ಷೇತ್ರಗಳ ಚೇತರಿಕೆಯ ಫಲಿತಾಂಶಗಳಿಂದಾಗಿ, ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 329 ಪಾಯಿಂಟ್‌ಗಳಿಗೆ ಏರಿಕೆ ಕಂಡಿದೆ.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 385 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಪೇಟೆ ಬಿಎಸ್‌ಇ-30 ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 328.75 ಪಾಯಿಂಟ್‌ಗಳ ಏರಿಕೆ ಕಂಡು 19,850 ರೂಪಾಯಿಗಳಿಗೆ ತಲುಪಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಇನ್ಫೋಸಿಸ್ ಟೆಕ್ನಾಲಾಜೀಸ್ ಕಂಪೆನಿಗಳ ಚೇತರಿಕೆಯ ವಹಿವಾಟಿನಿಂದಾಗಿ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 98.20 ಪಾಯಿಂಟ್‌ಗಳ ಏರಿಕೆ ಕಂಡು 5,960.90 ಅಂಕಗಳಿಗೆ ತಲುಪಿದೆ.
ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೋಸಿಸ್ ಟೆಕ್ನಾಲಾಜೀಸ್, ಟಾಟಾ ಸ್ಟೀಲ್, ಜೆಎಸ್‌ಡಬ್ಲು ಸ್ಟೀಲ್ ಹಿಂಡಾಲ್ಕೊ ಇಂಡಸ್ಟ್ರೀಸ್ ಡಿಎಲ್‌ಎಫ್ ಲಿಮಿಟೆಡ್, ಡಿಬಿ ರಿಯಲ್ಟಿ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
ವಾಹನೋದ್ಯಮ ಕ್ಷೇತ್ರದಲ್ಲಿ ಟಾಟಾ ಮೋಟಾರ್ಸ್, ಮಹೀಂದ್ರಾ ಆಂಡ್ ಮಹೀಂದ್ರಾ ಕಂಪೆನಿಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.