ದೇಶದ ರಫ್ತು ವಹಿವಾಟಿನ ಚೇತರಿಕೆಯ ಫಲಿತಾಂಶದಿಂದಾಗಿ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇರುಪೇಟೆ ಸೂಚ್ಯಂಕ 234 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಕಳೆದ ಮೂರು ದಿನಗಳ ವಹಿವಾಟಿನಲ್ಲಿ 713.39 ಪಾಯಿಂಟ್‌ಗಳ ಚೇತರಿಕೆ ಕಂಡು ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 234.25 ಪಾಯಿಂಟ್‌ಗಳ ಏರಿಕೆ ಕಂಡು 20,084.25 ಅಂಕಗಳಿಗೆ ತಲುಪಿದೆ.
ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ,68.60 ಪಾಯಿಂಟ್‌ಗಳ ಚೇತರಿಕೆ ಕಂಡು 6,029.50 ಅಂಕಗಳಿಗೆ ತಲುಪಿದೆ.
ದೇಶದ ಆರ್ಥಿಕ ವರ್ಧಿ ದರ ಚೇತರಿಕೆ ಹಾಗದೂ ರಫ್ತು ವಹಿವಾಟಿನಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.