ಲಾಭದಾಯಕ ಬುಕ್ಕಿಂಗ್ ಹಿನ್ನೆಲೆಯಿಂದಾಗಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇರುಪೇಟೆ ಸೂಚ್ಯಂಕ 40 ಪಾಯಿಂಟ್‌ಗಳ ಇಳಿಕೆ ಕಂಡಿದೆ.
ಕಳೆದ ನಾಲ್ಕು ದಿನಗಳ ಅವಧಿಯಲ್ಲಿ 713.39 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 40.27 ಪಾಯಿಂಟ್‌ಗಳ ಕುಸಿತ ಕಂಡು 19,952.43 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 20.40 ಪಾಯಿಂಟ್‌ಗಳ ಕುಸಿತ ಕಂಡು 5,991.30 ಅಂಕಗಳಿಗೆ ತಲುಪಿದೆ.