ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ (Sensex | UP | Equities | BSE | NSE)
Bookmark and Share Feedback Print
 
ಶೇರುಪೇಟೆಯ ಪ್ರಮುಖ ಕಂಪೆನಿಗಳ ವಹಿವಾಟಿನಲ್ಲಿ ಚೇತರಿಕೆಯಾಗಿದ್ದರಿಂದ, ಇಂದಿನ ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕ 145 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಬಿಎಸ್‌ಇ-30 ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 145.55 ಪಾಯಿಂಟ್‌ಗಳ ಏರಿಕೆ ಕಂಡು 20,112.48 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.73ರಷ್ಟು ಏರಿಕೆ ಕಂಡು 6,036.7 ಅಂಕಗಳಿಗೆ ತಲುಪಿದೆ.

ಬಿಎಸ್‌ಇ ಮಿಡ್‌ಕ್ಯಾಪ್ ಸೂಚ್ಯಂಕ ಕೂಡಾ ಆರಂಭಿಕ ವಹಿವಾಟಿನಲ್ಲಿ ಶೇ.0.89ರಷ್ಟು ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಬಿಎಸ್‌ಇ ಸ್ಮಾಲ್‌ಕ್ಯಾಪ್ ಸೂಚ್ಯಂಕ ಕೂಡಾ ಆರಂಭಿಕ ವಹಿವಾಟಿನಲ್ಲಿ ಶೇ.0.84ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ