ಏಷ್ಯಾದ ಇತರ ಮಾರುಕಟ್ಟೆಗಳ ದುರ್ಬಲ ವಹಿವಾಟು ಹಾಗೂ ಲಾಭದಾಯಕ ವಹಿವಾಟಿನ ಹಿನ್ನೆಲೆಯಲ್ಲಿ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 46 ಪಾಯಿಂಟ್‌ಗಳ ಕುಸಿತ ಕಂಡಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 14.38 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 46.68 ಪಾಯಿಂಟ್‌ಗಳ ಇಳಿಕೆ ಕಂಡು 19,934.63 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ 13.40 ಪಾಯಿಂಟ್‌ಗಳ ಚೇತರಿಕೆ ಕಂಡು 5,978.85 ಅಂಕಗಳಿಗೆ ತಲುಪಿದೆ.
ಆಯ್ದ ಪ್ರಮುಖ ಕಂಪೆನಿಗಳ ಶೇರುಗಳ ಖರೀದಿಗೆ ಮಾತ್ರ ಹೂಡಿಕೆದಾರರ ಆಸಕ್ತಿ ಹಾಗೂ ಏಷ್ಯಾದ ಇತರ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.31ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.14ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಅಮೆರಿಕದ ಡೊ ಜೊನ್ಸ್ ಮಾರುಕಟ್ಟೆ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.17ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.