ಏಷ್ಯಾದ ಮಾರುಕಟ್ಟೆಗಳ ದುರ್ಬಲ ವಹಿವಾಟು ಹಾಗೂ ಲಾಭದಾಯಕ ಹೂಡಿಕೆಯ ಹಿನ್ನೆಲೆಯಲ್ಲಿ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 155 ಪಾಯಿಂಟ್‌ಗಳ ಕುಸಿತ ಕಂಡಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 46.67 ಪಾಯಿಂಟ್‌ಗಳ ಕುಸಿತ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 154.38 ಪಾಯಿಂಟ್‌ಗಳ ಕುಸಿತ ಕಂಡು 19,780,26 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, ಇಂದಿನ ಆರಂಭಿಕ ವಹಿವಾಟಿನಲ್ಲಿ 35.25 ಪಾಯಿಂಟ್‌ಗಳ ಚೇತರಿಕೆ ಕಂಡು 5,941.30 ಅಂಕಗಳಿಗೆ ತಲುಪಿದೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.79ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.81ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಅಮೆರಿಕದ ಡೊ ಜೊನ್ಸ್ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.03ರಷ್ಟು ಇಳಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.