ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಶೇರುಗಳ ಖರೀದಿಯ ಭರಾಟೆ:ಸೂಚ್ಯಂಕ ಚೇತರಿಕೆ (Sensex | NATIONAL STOCK EXCHANGE | BSE)
Bookmark and Share Feedback Print
 
ಜಾಗತಿಕ ಮಾರುಕಟ್ಟೆಗಳ ಸ್ಥಿರ ವಹಿವಾಟಿನ ಮಧ್ಯೆ ಹೂಡಿಕೆದಾರರು ಹಾಗೂ ರಿಟೇಲ್ ವಹಿವಾಟುದಾರರು ಶೇರುಗಳ ಖರೀದಿಯಲ್ಲಿ ಆಸಕ್ತಿ ತೋರಿದ್ದರಿಂದ, ಇಂದಿನ ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕ 75 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.

ಕಳೆದ ದಿನಗಳ ವಹಿವಾಟಿನಲ್ಲಿ 285 ಪಾಯಿಂಟ್‌ಗಳ ನಷ್ಟ ಅನುಭವಿಸಿದ ಬಿಎಸ್‌ಇ-3- ಸೂಚ್ಯಂಕ, ತೈಲ ಮತ್ತು ಅನಿಲ, ಉಕ್ಕು ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಶೇರುಗಳ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ, ಇಂದಿನ ಆರಂಭಿಕ ವಹಿವಾಟಿನಲ್ಲಿ 74.61 ಪಾಯಿಂಟ್‌ಗಳ ಚೇತರಿಕೆ ಕಂಡು 19,771.09 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, ಇಂದಿನ ಆರಂಭಿಕ ವಹಿವಾಟಿನಲ್ಲಿ 23.60 ಪಾಯಿಂಟ್‌ಗಳ ಚೇತರಿಕೆ ಕಂಡು 5,927.30 ಅಂಕಗಳಿಗೆ ತಲುಪಿದೆ.

ಹೂಡಿಕೆದಾರರು ಹಾಗೂ ರಿಟೇಲ್ ವಹಿವಾಟುದಾರರಿಂದ ಶೇರುಗಳ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ, ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ0.54 ರಷ್ಟು ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಜಪಾನ್‌ನ ನಿಕೈ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ0.45 ರಷ್ಟು ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಮೆರಿಕದ ಡೊ ಜೊನ್ಸ್ ಮಾರುಕಟ್ಟೆ ಇಂದಿನ ವಹಿವಾಟಿನ ಮುಕ್ತಾಯಕ್ಕೆಶೇ.0.12ರಷ್ಟು ಏರಿಕೆ ಕಂಡು ಅಂತ್ಯವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ