ಸತತ ಮೂರು ದಿನಗಳ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ, ಶೇರುಗಳ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ ಇಂದಿನ ವಹಿವಾಟಿನ ಮುಕ್ತಾಯಕ್ಕೆ 266 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಕಳೆದ ಮೂರು ದಿನಗಳ ವಹಿವಾಟಿನಲ್ಲಿ 740 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 266.53 ಪಾಯಿಂಟ್‌ಗಳ ಚೇತರಿಕೆ ಕಂಡು 19,508.89 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ವಹಿವಾಟಿನ ಮುಕ್ತಾಯಕ್ಕೆ, ಸೂಚ್ಯಂಕ 90.85 ಪಾಯಿಂಟ್‌ಗಳ ಚೇತರಿಕೆ ಕಂಡು 5,857.35 ಅಂಕಗಳಿಗೆ ತಲುಪಿದೆ.
ವಿಡಿಯೋಕಾನ್ ಇಂಡಸ್ಟ್ರೀಸ್ ಮತ್ತು ಟಿಟಾನ್ ಇಂಡಸ್ಟ್ರೀಸ್, ಗೃಹೋಪದಕರಣ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
ಬ್ಯಾಂಕಿಂಗ್, ತೈಲ ಮತ್ತು ಅನಿಲ, ರಿಲಯನ್ಸ್ ಇಂಡಸ್ಟ್ರೀಸ್, ಸ್ಟೆರ್ಲೈಟ್ ಇಂಡಸ್ಟ್ರೀಸ್ ,ಟಾಟಾ ಸ್ಟೀಲ್ ಶೇರುಗಳು ಕೂಡಾ ವಹಿವಾಟಿನಲ್ಲಿ ಏರಿಕೆ ಕಂಡಿವೆ.