ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಹೆಲ್ತ್‌ಕೇರ್, ಉಕ್ಕು ಶೇರು ಖರೀದಿ ಹೆಚ್ಚಳ:ಸೂಚ್ಯಂಕ ಚೇತರಿಕೆ (Sensex | BSE | Nifty | US markets | Asian bourses)
Bookmark and Share Feedback Print
 
PTI
ಹೆಲ್ತ್‌ಕೇರ್, ಉಕ್ಕು ಮತ್ತು ಸಾರ್ವಜನಿಕ ಕ್ಷೇತ್ರಗಳ ಚೇತರಿಕೆಯಿಂದಾಗಿ ಶೇರುಪೇಟೆ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 95 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಬಿಎಸ್‌ಇ-30 ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 95.81 ಪಾಯಿಂಟ್‌ಗಳ ಏರಿಕೆ ಕಂಡು 19,604.70 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, ವಹಿವಾಟಿನಲ್ಲಿ 30.30 ಪಾಯಿಂಟ್‌ಗಳ ಏರಿಕೆ ಕಂಡು 5,887.00 ಅಂಕಗಳಿಗೆ ತಲುಪಿದೆ.

ಸಾಗರೋತ್ತರ ರಾಷ್ಟ್ರಗಳಲ್ಲಿ ಕೈಗಾರಿಕೆ ವೃದ್ಧಿ ದರ ಚೇತರಿಕೆ ಹಾಗೂ ಸದೃಢ ಆರ್ಥಿಕತೆಯ ಹಿನ್ನೆಲೆಯಲ್ಲಿ, ಏಷ್ಯಾದ ಮಾರುಕಟ್ಟೆಗಳು ಕೂಡಾ ಚೇತರಿಕೆಯತ್ತ ಸಾಗುತ್ತಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.65ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.23ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಮೆರಿಕದ ಡೊ ಜೊನ್ಸ್ ಮಾರುಕಟ್ಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.35ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ