ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಶೇರುಗಳ ಖರೀದಿ ಭರಾಟೆ:ಸೂಚ್ಯಂಕ ಚೇತರಿಕೆ (Stock market | Sensex | Nifty)
Bookmark and Share Feedback Print
 
ಜಾಗತಿಕ ಮಾರುಕಟ್ಟೆಗಳ ಸ್ಥಿರ ವಹಿವಾಟು ಹಾಗೂ ಕೈಗಾರಿಕೋದ್ಯಮ ಕ್ಷೇತ್ರದ ಚೇತರಿಕೆಯಿಂದಾಗಿ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 183 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಬಿಎಸ್‌ಇ-30 ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 182.89 ಪಾಯಿಂಟ್‌ಗಳ ಚೇತರಿಕೆ ಕಂಡು 19,691.78 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 50.30 ಪಾಯಿಂಟ್‌ಗಳ ಏರಿಕೆ ಕಂಡು 5,907.65 ಅಂಕಗಳಿಗೆ ತಲುಪಿದೆ.

ರಿಲಯನ್ಸ್ ಇಂಡಸ್ಟ್ರೀಸ್, ಎಚ್‌ಡಿಎಫ್‌ಸಿ ಲಿಮಿಟೆಡ್, ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ, ಟಾಟಾ ಸ್ಟೀಲ್, ಬಿಎಚ್‌ಇಎಲ್, ಲಾರ್ಸನ್ ಆಂಡ್ ಟೌಬ್ರೋ, ಟಾಟಾ ಮೋಟಾರ್ಸ್, ಟಾಟಾ ಪವರ್, ರಿಲಯನ್ಸ್ ಇನ್‌ಫ್ರಾ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

ರಿಯಲ್ಟಿ ಕ್ಷೇತ್ರದ ಡಿಎಲ್‌ಎಫ್, ಎಚ್‌ಡಿಐಎಲ್ ಮತ್ತು ಇಂಡಿಯಾಬುಲ್ಸ್ ರಿಯಲ್ ಎಸ್ಟೇಟ್‌ ಕಂಪೆನಿಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

ಉಕ್ಕು ಕ್ಷೇತ್ರದ ಶೇರುಗಳು ಕೂಡಾ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದು, ಹಿಂಡಾಲ್ಕೊ ಇಂಡಸ್ಟ್ರೀಸ್,ಹಿಂದೂಸ್ತಾನ್ ಝಿಂಕ್, ಜೆಎಸ್‌ಡಬ್ಲು ಸ್ಟೀಲ್ ಕಂಪೆನಿಗಳ ಶೇರುಗಳು ಕೂಡಾ ಲಾಭದತ್ತ ಸಾಗಿವೆ.

ಬಿಎಸ್‌ಇ-ಸ್ಮಾಲ್ ಕ್ಯಾಪ್ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.2.05ರಷ್ಟು ಏರಿಕೆ ಕಂಡು 9,134.65 ಅಂಕಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಬಿಎಸ್‌ಇ-ಮಿಡ್ ಕ್ಯಾಪ್ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.1.77ರಷ್ಟು ಏರಿಕೆ ಕಂಡು 7,537.00 ಅಂಕಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ