ಏಷ್ಯಾದ ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ ಹೂಡಿಕೆದಾರರು ಶೇರುಗಳ ಖರೀದಿಯಲ್ಲಿ ಆಸಕ್ತಿಯನ್ನು ತೋರಿದ್ದರಿಂದ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 65 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 450 ಪಾಯಿಂಟ್‌ಗಳ ಏರಿಕೆ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 64.80 ಪಾಯಿಂಟ್‌ಗಳ ಏರಿಕೆ ಕಂಡು 19,756.58 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 21.70 ಪಾಯಿಂಟ್‌ಗಳ ಚೇತರಿಕೆ ಕಂಡು 5,929.35 ಅಂಕಗಳಿಗೆ ತಲುಪಿದೆ.
ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟು ಹಾಗೂ ಕೈಗಾರಿಕೆ ವೃದ್ಧಿ ದರ ಚೇತರಿಕೆಯಿಂದಾಗಿ, ಹೂಡಿಕೆದಾರರು ಶೇರುಗಳ ಖರೀದಿಯಲ್ಲಿ ತೊಡಗಿದ್ದಾರೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.27ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.05ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಅಮೆರಿಕದ ಡೊ ಜೊನ್ಸ್ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.16ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.