ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಲಾಭದಾಯಕ ವಹಿವಾಟು:ಶೇರುಪೇಟೆ ಸೂಚ್ಯಂಕ ಕುಸಿತ (Sensex |NSE | Dow Jones | Bombay stock exchange)
Bookmark and Share Feedback Print
 
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ, ಲಾಭದಾಯಕ ಹೂಡಿಕೆಗೆ ಹೂಡಿಕೆದಾರರು ಆಸಕ್ತಿ ವಹಿಸಿದ ಹಿನ್ನೆಲೆಯಲ್ಲಿ,ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 77 ಪಾಯಿಂಟ್‌ಗಳ ಕುಸಿತ ಕಂಡಿದೆ.

ಕಳೆದ ಮೂರು ದಿನಗಳ ವಹಿವಾಟಿನಲ್ಲಿ 550 ಪಾಯಿಂಟ್‌ಗಳ ಚೇತರಿಕೆ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 76.80 ಪಾಯಿಂಟ್‌ಗಳ ಇಳಿಕೆ ಕಂಡು 19,722.39 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 26.35 ಪಾಯಿಂಟ್‌ಗಳ ಕುಸಿತ ಕಂಡು 5,917.75 ಅಂಕಗಳಿಗೆ ತಲುಪಿದೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.60ರಷ್ಟು ಇಳಿಕ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಜಪಾನ್‌ನ ನಿಕೈ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.04ರಷ್ಟು ಇಳಿಕ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಮೆರಿಕದ ಡೊ ಜೊನ್ಸ್ ಮಾರುಕಟ್ಟೆ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.42ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ