ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಬ್ಯಾಂಕಿಂಗ್, ರಿಯಲ್ಟಿ ವಹಿವಾಟು ಕುಸಿತದಿಂದ ಸೂಚ್ಯಂಕ ಇಳಿಕೆ (TRAI Chairman Pradip Baijal | Sensex | Reserve bank of india)
Bookmark and Share Feedback Print
 
ಸತತ ಮೂರು ದಿನಗಳಿಂದ ಗೆಲುವಿನ ಓಟ ಮುಂದುವರಿಸಿದ್ದ ಶೇರುಪೇಟೆ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 150 ಪಾಯಿಂಟ್‌ಗಳ ಕುಸಿತ ಕಂಡಿದೆ.

ಪೆಟ್ರೋಲ್ ದರ ಹೆಚ್ಚಳ ಹಾಗೂ ನಾಳೆ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳನ್ನು ಹೆಚ್ಚಿಸುವ ಆತಂಕಗಳಿಂದಾಗಿ, ಹೂಡಿಕೆದಾರರು ಶೇರುಗಳ ಖರೀದಿಯಲ್ಲಿ ನಿರಾಸಕ್ತಿ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬ್ಯಾಂಕಿಂಗ್, ರಿಯಲ್ಟಿ ಕ್ಷೇತ್ರದ ಶೇರುಗಳ ವಹಿವಾಟಿನಲ್ಲಿ ಕುಸಿತ ಕಂಡಿದ್ದರಿಂದ ಬಿಎಸ್‌ಇ-30 ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 151.42 ಪಾಯಿಂಟ್‌ಗಳ ಕುಸಿತ ಕಂಡು 19,647.77 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 51.80 ಪಾಯಿಂಟ್‌ಗಳ ಏರಿಕೆ ಕಂಡು 5,892.30 ಅಂಕಗಳಿಗೆ ತಲುಪಿದೆ.

ತೈಲ ಮತ್ತು ಅನಿಲ ಕ್ಷೇತ್ರಗಳ ಶೇರುಗಳು ವಹಿವಾಟಿನ ಮುಕ್ತಾಯಕ್ಕೆ ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಮೆರಿಕದ ಆರ್ಥಿಕತೆ ಚೇತರಿಸಿಕೊಂಡಿದ್ದರಿಂದ ಐಟಿ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಶೇರುಗಳು, ವಹಿವಾಟಿನ ಮುಕ್ತಾಯಕ್ಕೆ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: TRAI Chairman Pradip Baijal, Sensex, Reserve bank of india