ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ (Sensex | Nifty | RBI policy | Hang Seng)
Bookmark and Share Feedback Print
 
ಹೂಡಿಕೆದಾರರಿಂದ ಕೆಲ ಆಯ್ದ ಕಂಪೆನಿಗಳ ಶೇರುಗಳಲ್ಲಿ ಹೂಡಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 65 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 151.42 ಪಾಯಿಂಟ್‌ಗಳ ಕುಸಿತ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 65.54 ಪಾಯಿಂಟ್‌ಗಳ ಏರಿಕೆ ಕಂಡು 19,713.31 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ , ಇಂದಿನ ಆರಂಭಿಕ ವಹಿವಾಟಿನಲ್ಲಿ 18.35 ಪಾಯಿಂಟ್‌ಗಳ ಏರಿಕೆ ಕಂಡು 5,910.65 ಅಂಕಗಳಿಗೆ ತಲುಪಿದೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.27ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಜಪಾನ್‌ನ ನಿಕೈ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.10ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಮೆರಿಕದ ಡೊ ಜೊನ್ಸ್ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.17ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ