ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಲಾಭದಾಯಕ ವಹಿವಾಟು: ಶೇರುಪೇಟೆ ಸೂಚ್ಯಂಕ ಕುಸಿತ (Sensex | Nifty | BSE | Sensex | profit-booking)
Bookmark and Share Feedback Print
 
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಹೂಡಿಕೆದಾರರು ಲಾಭದಾಯಕ ವಹಿವಾಟಿಗೆ ಆಸಕ್ತಿ ತೋರಿದ ಹಿನ್ನೆಲೆಯಲ್ಲಿ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 100 ಪಾಯಿಂಟ್‌ಗಳ ಕುಸಿತ ಕಂಡಿದೆ.

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 217.08 ಅಂಕಗಳ ಚೇತರಿಕೆ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಿಂದಿನ ಆರಂಭಿಕ ವಹಿವಾಟಿನಲ್ಲಿ 99.99 ಪಾಯಿಂಟ್‌ಗಳ ಏರಿಕೆ ಕಂಡು 19,764.86 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 34.30 ಪಾಯಿಂಟ್‌ಗಳ ಕುಸಿತ ಕಂಡು 5,914.45 ಅಂಕಗಳಿಗೆ ತಲುಪಿದೆ.

ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಹೂಡಿಕೆದಾರರು ಲಾಭದಾಯಕ ವಹಿವಾಟಿಗೆ ಆಸಕ್ತಿ ತೋರಿದ ಹಿನ್ನೆಲೆಯಲ್ಲಿ, ಮಾರುಕಟ್ಟೆ ಕುಸಿತ ಕಂಡಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ, ತೈಲ ಮತ್ತು ಅನಿಲ ಹಾಗೂ ಉಕ್ಕು ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಭಾರಿ ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.01ರಷ್ಟು ಕುಸಿತ ಕಂಡಿದೆ.ಜಪಾನ್‌ನ ನಿಕೈ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.10ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಮೆರಿಕದ ಡೊ ಜೊನ್ಸ್ ಮಾರುಕಟ್ಟೆ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.06ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ