ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: 20,000 ಗಡಿ ದಾಟಿದ ಶೇರುಪೇಟೆ ಸೂಚ್ಯಂಕ (BSE benchmark | Sensex | Nifty | Hang Seng)
Bookmark and Share Feedback Print
 
ಸತತ ಎರಡನೇ ದಿನವೂ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ, 116 ಪಾಯಿಂಟ್‌ಗಳ ಚೇತರಿಕೆ ಕಂಡು 20,000 ಗಡಿಯನ್ನು ದಾಟಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಹಿಂದಿನ ದಿನದ ವಹಿವಾಟಿನ ಅಂತ್ಯಕ್ಕೆ 240 ಪಾಯಿಂಟ್‌ಗಳ ಏರಿಕೆ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 116.36 ಪಾಯಿಂಟ್‌ಗಳ ಏರಿಕೆ ಕಂಡು 20,005.24 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 35.65 ಪಾಯಿಂಟ್‌ಗಳ ಏರಿಕೆ ಕಂಡು 5,982.70 ಅಂಕಗಳಿಗೆ ತಲುಪಿದೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.45 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಜಪಾನ್‌ನ ನಿಕೈ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.59 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ