ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ, ಶೇರುಗಳ ಖರೀದಿಯ ಭರಾಟೆ ಮುಂದುವರಿದಿದ್ದರಿಂದ, ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 77 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಕಳೆದ ಮೂರು ದಿನಗಳ ವಹಿವಾಟಿನಲ್ಲಿ 410 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 77.07 ಪಾಯಿಂಟ್‌ಗಳ ಏರಿಕೆ ಕಂಡು 20, 137.39 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 18.40 ಪಾಯಿಂಟ್‌ಗಳ ಏರಿಕೆ ಕಂಡು 6,019.05 ಅಂಕಗಳಿಗೆ ತಲುಪಿದೆ.
ಬ್ಯಾಂಕಿಂಗ್, ಉಕ್ಕು ಮತ್ತು ರಿಯಲ್ಟಿ ಕ್ಷೇತ್ರಗಳ ಶೇರುಗಳ ಖರೀದಿಯ ವಹಿವಾಟಿನಲ್ಲಿ ಹೆಚ್ಚಳವಾಗಿದೆ ಎಂದು ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.17ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.21ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಅಮೆರಿಕದ ಡೊ ಜೊನ್ಸ್ ಮಾರುಕಟ್ಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.48ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.