ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್ : ಶೇರುಗಳ ಖರೀದಿಯ ಭರಾಟೆ:ಸೂಚ್ಯಂಕ ಚೇತರಿಕೆ (Stock market | Sensex | Nifty | BSE India)
Bookmark and Share Feedback Print
 
ಜಾಗತಿಕ ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ ಹೂಡಿಕೆದಾರರಿಂದ ಶೇರುಗಳ ಖರೀದಿಯಲ್ಲಿ ಹೆಚ್ಚಳದಿಂದಾಗಿ ಇಂದಿನ ಆರಂಭಿಕ ವಹಿವಾಟಿನಲ್ಲಿ 57 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಹಿಂದಿನ ದಿನದ ವಹಿವಾಟಿನಲ್ಲಿ 44.52 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 57.10 ಪಾಯಿಂಟ್‌ಗಳ ಏರಿಕೆ ಕಂಡು 20,072.90 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 22.05 ಪಾಯಿಂಟ್‌ಗಳ ಏರಿಕೆ ಕಂಡು 6,006.45 ಅಂಕಗಳಿಗೆ ತಲುಪಿದೆ.

ಅಮೆರಿಕದ ಆರ್ಥಿಕತೆ ಚೇತರಿಕೆಯಿಂದಾಗಿ, ಏಷ್ಯಾ ಮಾರುಕಟ್ಟೆಗಳು ಕೂಡಾ ಚೇತರಿಕೆ ಕಂಡಿದ್ದರಿಂದ ವಹಿವಾಟಿನಲ್ಲಿ ಹೆಚ್ಚಳವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.26 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಮೆರಿಕದ ಡೊ ಜೊನ್ಸ್ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.23 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ