ಹೊಸ ವರ್ಷಕ್ಕೆ ಕೆಲವೇ ದಿನಗಳಿರುವಂತೆ ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ, ಹೂಡಿಕೆದಾರರು ಲಾಭದಾಯಕ ವಹಿವಾಟಿನಲ್ಲಿ ತೊಡಗಿದ್ದರಿಂದ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 102 ಪಾಯಿಂಟ್‌ಗಳ ಕುಸಿತ ಕಂಡಿದೆ.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 77 ಪಾಯಿಂಟ್‌ಗಳ ಕುಸಿತ ಕಂಡ ಬಿಎಸ್‌ಇ-30 ಸೂಚ್ಯಂಕ, ಉಕ್ಕು, ತಂತ್ರಜ್ಞಾನ, ಬ್ಯಾಂಕಿಂಗ್ ಮತ್ತು ವಾಹನೋದ್ಯಮ ಕ್ಷೇತ್ರಗಳ ಶೇರುಗಳ ಖರೀದಿಯಲ್ಲಿ ಕುಸಿತವಾಗಿದ್ದರಿಂದ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 102.52 ಪಾಯಿಂಟ್‌ಗಳ ಕುಸಿತ ಕಂಡು 19,880.36 ಅಂಕಗಳಿಗೆ ತಲುಪಿದೆ
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 39.75 ಪಾಯಿಂಟ್‌ಗಳ ಇಳಿಕೆ ಕಂಡು 5,940.25 ಅಂಕಗಳಿಗೆ ತಲುಪಿದೆ.
ಲಾಭದಾಯಕ ವಹಿವಾಟಿನ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಮಾರಾಟದಲ್ಲಿ ತೊಡಗಿದ್ದರಿಂದ ಶೇರುಪೇಟೆ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಆಹಾರ ಹಣದುಬ್ಬರ ದರ ಡಿಸೆಂಬರ್ 11ಕ್ಕೆ ವಾರಂತ್ಯಗೊಂಡಂತೆ, ಆರು ವಾರಗಳ ಗರಿಷ್ಠ ಶೇ.12.13ಕ್ಕೆ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.68ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.10ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.