ಸತತ ಎರಡು ದಿನಗಳ ಕುಸಿತದಿಂದ ಚೇತರಿಸಿಕೊಂಡ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 91 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 77 ಪಾಯಿಂಟ್‌ಗಳ ಕುಸಿತ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 91 ಪಾಯಿಂಟ್‌ಗಳ ಏರಿಕೆ ಕಂಡು 20,073.66 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡಾ ವಹಿವಾಟಿನ ಮುಕ್ತಾಯಕ್ಕೆ 31.60 ಪಾಯಿಂಟ್‌ಗಳ ಏರಿಕೆ ಕಂಡು 6,011.60 ಅಂಕಗಳಿಗೆ ತಲುಪಿದೆ.