ಉಕ್ಕು, ತಂತ್ರಜ್ಞಾನ ಮತ್ತು ತೈಲ ಹಾಗೂ ಅನಿಲ ಕ್ಷೇತ್ರಗಳ ಶೇರುಗಳ ಖರೀದಿಯ ಭರಾಟೆಯಿಂದಾಗಿ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 86 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
ಬಿಎಸ್‌ಇ-30 ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ, 86.34 ಪಾಯಿಂಟ್‌ಗಳ ಚೇತರಿಕೆ ಕಂಡು 20,158.00 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 24.25 ಪಾಯಿಂಟ್‌ಗಳ ಚೇತರಿಕೆ ಕಂಡು 6,035.85 ಅಂಕಗಳಿಗೆ ತಲುಪಿದೆ.
ಆಯ್ದ ಕೆಲ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಜಪಾನ್‌ನ ನಿಕೈ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.81ರಷ್ಟು ಚೇತರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.30ರಷ್ಟು ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.