ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಲಾಭದಾಯಕ ವಹಿವಾಟು: ಶೇರುಪೇಟೆ ಸೂಚ್ಯಂಕ ಮತ್ತೆ ಕುಸಿತ (Sensex | Profit-booking | European region | Nifty | Infosys Technologies)
ಯುರೋಪ್ ಮಾರುಕಟ್ಟೆಗಳ ದುರ್ಬಲ ವಹಿವಾಟು ಲಾಭದಾಯಕ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 45 ಪಾಯಿಂಟ್‌ಗಳ ಕುಸಿತ ಕಂಡಿದೆ.
20,190.13 ಅಂಕಗಳಿಗೆ ತಲುಪಿದ್ದ ಬಿಎಸ್‌ಇ-30 ಸೂಚ್ಯಂಕ, ಉಕ್ಕು, ರಿಯಲ್ಟಿ ಮತ್ತು ವವರ್ ಕ್ಷೇತ್ರಗಳ ಶಶೇರು ವಹಿವಾಟು ಕುಸಿತದಿಂದಾಗಿ ಇಂದಿನ ವಹಿವಾಟಿನ ಮುಕ್ತಾಯಕ್ಕೆ 44.73 ಪಾಯಿಂಟ್‌ಗಳ ಚೇತರಿಕೆ ಕಂಡು 20,028.93 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 13.50 ಪಾಯಿಂಟ್‌ಗಳ ಕುಸಿತ ಕಂಡು 5,998.10 ಅಂಕಗಳಿಗೆ ತಲುಪಿದೆ.
ರಿಯಲ್ಟಿ, ಪವರ್ ಸೂಚ್ಯಂಕ, ಎಫ್‌ಎಂಸಿಜಿ ಶೇರುಗಳು ವಹಿವಾಟಿನ ಮುಕ್ತಾಯಕ್ಕೆ ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಅಮೆರಿಕದ ಆರ್ಥಿಕತೆ ಚೇತರಿಕೆಯಿಂದಾಗಿ ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ. ಇನ್ಫೋಸಿಸ್ ಟೆಕ್ನಾಲಾಜೀಸ್ ಸತತ ನಾಲ್ಕನೇ ದಿನವೂ ಏರಿಕೆ ಕಂಡಿದೆ.
ಸ್ಮಾಲ್‌ಕ್ಯಾಪ್ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.21 ರಷ್ಟು ಏರಿಕೆ ಕಂಡಿದೆ. ಮಿಡ್‌ಕ್ಯಾಪ್ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.17 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.