ರಿಟೇಲ್ ಹೂಡಿಕೆದಾರರ ಶೇರುಗಳ ಖರೀದಿಯ ಭರಾಟೆಯಿಂದಾಗಿ, ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 61 ಪಾಯಿಂಟ್‌ಗಳ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 44.73 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 61.48 ಪಾಯಿಂಟ್‌ಗಳ ಏರಿಕೆ ಕಂಡು 20,090.41 ಅಂಕಗಳಿಗೆ ತಲಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 12.80 ಪಾಯಿಂಟ್‌ಗಳ ಏರಿಕೆ ಕಂಡು 6,010.90 ಅಂಕಗಳಿಗೆ ತಲುಪಿದೆ.
ಉಕ್ಕು, ಗೃಹೋಪಕರಣ ವಸ್ತುಗಳು, ವಿದ್ಯುತ್ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಶೇರುಗಳ ಖರೀದಿಗೆ ಹೂಡಿಕೆದಾರರು ಹೆಚ್ಚಿನ ಆಸಕ್ತಿಯನ್ನು ತೋರಿದ್ದರಿಂದ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಹೊಸ ವರ್ಷದ ಆರಂಭಕ್ಕೆ ಕೇವಲ ಮೂರು ದಿನಗಳು ಬಾಕಿ ಉಳಿದಿರುವಂತೆ ವಿದೇಶಿ ಬಂಡವಾಳ ಹೂಡಿಕೆದಾರರು ಶೇರುಗಳ ಖರೀದಿಯಲ್ಲಿ ನಿರಾಸಕ್ತಿಯನ್ನು ತೋರಿದ್ದರಿಂದ, ವಹಿವಾಟಿನಲ್ಲಿ ಅಲ್ಪ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.