ಸೆನ್ಸೆಕ್ಸ್ : ಬ್ಯಾಕಿಂಗ್,ತಂತ್ರಜ್ಞಾನ ಶೇರುಗಳ ಖರೀದಿ ಹೆಚ್ಚಳ
ಮುಂಬೈ, ಬುಧವಾರ, 29 ಡಿಸೆಂಬರ್ 2010( 12:11 IST )
ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಅಲ್ಪ ಚೇತರಿಕೆ ಕಂಡಿದ್ದರಿಂದ,ಸೂಚ್ಯಂಕ 76 ಪಾಯಿಂಟ್‌ಗಳಿಗೆ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಬ್ಯಾಂಕಿಂಗ್, ಉಕ್ಕು, ತಂತ್ರಜ್ಞಾನ ಮತ್ತು ಗೃಹೋಪಕರಣ ವಸ್ತುಗಳ ಶೇರು ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ ಬಿಎಸ್‌ಇ-30 ಸೂಚ್ಯಂಕ, ವಹಿವಾಟು ಆರಂಭವಾದ ಕೇವಲ ಐದು ನಿಮಿಷದ ವಹಿವಾಟಿನಲ್ಲಿ 76.37 ಪಾಯಿಂಟ್‌ಗಳ ಚೇತರಿಕೆ ಕಂಡು 20,101.79 ಅಂಕಗಳಿಗೆ ತಲುಪಿದೆ.
ಏಷ್ಯಾ ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ ದೇಶಿಯ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಆದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 21.90 ಪಾಯಿಂಟ್‌ಗಳ ಏರಿಕೆ ಕಂಡು 6,017.90 ಅಂಕಗಳಿಗೆ ತಲುಪಿದೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.69 ರಷ್ಟು ಏರಿಕೆ ಕಂಡಿದೆ. ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.34 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಅಮೆರಿಕದ ಡೊ ಜೊನ್ಸ್ ಮಾರುಕಟ್ಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.18 ರಷ್ಟು ಏರಿಕೆ ಕಂಡಿದೆ.