ಐಟಿ, ಟೆಕ್, ಬಂಡವಾಳ ಯಂತ್ರಗಳು ಉಕ್ಕು, ಮತ್ತು ರಿಯಲ್ಟಿ ಕ್ಷೇತ್ರಗಳ ಶೇರು ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದರಿಂದ, ಶೇರುಪೇಟೆ ಸೂಚ್ಯಂಕ 82 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಹಿಂದಿನ ದಿನದ ವಹಿವಾಟಿನಲ್ಲಿ 231 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 81.71 ಪಾಯಿಂಟ್‌ಗಳ ಚೇತರಿಕೆ ಕಂಡು 20,337.74 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 19.50 ಪಾಯಿಂಟ್‌ಗಳ ಏರಿಕೆ ಕಂಡು 6,079.85 ಅಂಕಗಳಿಗೆ ತಲುಪಿದೆ.
ವರ್ಷಾಂತ್ಯದ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗಳ ಆಯ್ಕೆಯಲ್ಲಿ ತೊಡಗಿದ್ದರಿಂದ ಶೇರುಪೇಟೆ ವಹಿವಾಟು ನಿಧಾನಗತಿಯ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.