ಏಷ್ಯಾ ಮಾರುಕಟ್ಟೆಯ ಸ್ಥಿರ ವಹಿವಾಟಿನಿಂದಾಗಿ ಕಳೆದ ಎರಡು ದಿನಗಳಿಂದ ಚೇತರಿಸಿಕೊಂಡ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಕೂಡಾ 93 ಪಾಯಿಂಟ್‌ಗಳ ಏರಿಕೆ ಕಂಡಿದೆ .
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 363 ಪಾಯಿಂಟ್‌ಗಳ ಚೇತರಿಕೆ ಕಂಡು ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 93.19 ಪಾಯಿಂಟ್‌ಗಳ ಏರಿಕೆ ಕಂಡು 20,482.26 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 46.05 ಪಾಯಿಂಟ್‌ಗಳ ಏರಿಕೆ ಕಂಡು 6,106.40 ಅಂಕಗಳಿಗೆ ತಲುಪಿದೆ.
ಏಷ್ಯಾ ಮಾರುಕಟ್ಟೆಯ ಸ್ಥಿರ ವಹಿವಾಟಿನಿಂದಾಗಿ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.13ರಷ್ಟು ಏರಿಕೆ ಕಂಡಿದೆ. ಅಮೆರಿಕದ ಡೊ ಜೊನ್ಸ್ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.1ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.