ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಭಾರಿ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ (Stock market | Sensex | Nifty)
Bookmark and Share Feedback Print
 
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಹೂಡಿಕೆಯಲ್ಲಿ ಹೆಚ್ಚಳ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದ ಹಿನ್ನೆಲೆಯಲ್ಲಿ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 154 ಪಾಯಿಂಟ್‌ಗಳ ಏರಿಕೆ ಕಂಡಿದೆ.

ವಾಹನೋದ್ಯಮ ಮತ್ತು ಇತರ ಕ್ಷೇತ್ರಗಳ ಶೇರುಗಳ ವಹಿವಾಟಿನಲ್ಲಿ ಚೇತರಿಕೆ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 153.77 ಪಾಯಿಂಟ್‌ಗಳ ಏರಿಕೆ ಕಂಡು 20,662.86 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 44.05 ಪಾಯಿಂಟ್‌ಗಳ ಏರಿಕೆ ಕಂಡು 6,178.55 ಅಂಕಗಳಿಗೆ ತಲುಪಿದೆ.

ವಾಹನೋದ್ಯಮ ಕ್ಷೇತ್ರ, ಮಹೀಂದ್ರಾ ಆಂಡ್ ಮಹೀಂದ್ರಾ, ಟಾಟಾ ಮೋಟಾರ್ಸ್, ಮಾರುತಿ ಸುಝುಕಿ ಕಂಪೆನಿಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

ಏತನ್ಮಧ್ಯೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.10 ರಷ್ಟು ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಜಪಾನ್‌ನ ಶೇರುಪೇಟೆಯಾದ ನಿಕೈ ಮಾರುಕಟ್ಟೆಗೆ ಇಂದು ರಜೆ ಘೋಷಿಸಲಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶೇರುಪೇಟೆ, ಸೆನ್ಸೆಕ್ಸ್, ನಿಫ್ಟಿ