ಜಾಗತಿಕ ಮಾರುಕಟ್ಟೆಗಳ ಸ್ಥಿರ ವಹಿವಾಟಿನ ಮಧ್ಯೆ, ಟಾಟಾ ಸ್ಟೀಲ್ ಎಚ್‌ಡಿಎಫ್‌ಸಿ ಬ್ಯಾಂಕ್ ಶೇರುಗಳ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 52 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಕಳೆದ ಮೂರು ದಿನಗಳ ವಹಿವಾಟಿನಲ್ಲಿ ಚೇತರಿಕೆ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 51.96 ಪಾಯಿಂಟ್‌ಗಳ ಚೇತರಿಕೆ ಕಂಡು 20,561.05 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 23.10 ಪಾಯಿಂಟ್‌ಗಳ ಏರಿಕೆ ಕಂಡು 6,157.60 ಅಂಕಗಳಿಗೆ ತಲುಪಿದೆ.
ವಹಿವಾಟಿನಲ್ಲಿ ಬ್ಯಾಂಕಿಂಗ್ ಕ್ಷೇತ್ರ ಚೇತರಿಕೆ ಕಂಡಿದ್ದು, ಎಚ್‌ಡಿಎಫ್‌ಸಿ ಬ್ಯಾಂಕ್, ಎಸ್‌ಬಿಐ, ರಿಲಯನ್ಸ್ ಇನ್‌ಫ್ರಾ, ಜೆಪಿ ಅಸೋಸಿಯೇಟ್ಸ್ ಮತ್ತು ಡಿಎಲ್‌ಎಫ್ ಶೇರುಗಳು ವಹಿವಾಟಿನಲ್ಲಿ ಏರಿಕೆ ಕಂಡಿವೆ.
ಏತನ್ಮಧ್ಯೆ, ಐಸಿಐಸಿಐ ಬ್ಯಾಂಕ್ ಶೇರುಗಳು ವಹಿವಾಟಿನ ಮುಕ್ತಾಯಕ್ಕೆ ಶೇ.0.49ರಷ್ಟು ಕುಸಿತ ಕಂಡಿದೆ.