ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್:ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕ ಕುಸಿತ (Sensex | Nifty | Asian markets | Retail investors)
Bookmark and Share Feedback Print
 
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನ ಹಿನ್ನೆಲೆಯಲ್ಲಿ, ಹೂಡಿಕೆದಾರರು ಶೇರುಗಳ ಮಾರಾಟದಲ್ಲಿ ತೊಡಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 50 ಪಾಯಿಂಟ್‌ಗಳ ಕುಸಿತ ಕಂಡಿದೆ.

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 62.33 ಪಾಯಿಂಟ್‌ಗಳ ಚೇತರಿಕೆ ಕಂಡ ಬಿಎಸ್‌ಇ-30 ಸೂಚ್ಯಂಕ, ರಿಯಲ್ಟಿ, ಹಣಕಾಸು ಕ್ಷೇತ್ರಗಳ ಶೇರುಗಳ ಮಾರಾಟದಿಂದಾಗಿಇಂದಿನ ಆರಂಭಿಕ ವಹಿವಾಟಿನಲ್ಲಿ 50.55 ಪಾಯಿಂಟ್‌ಗಳ ಇಳಿಕೆ ಕಂಡು 20,448.17 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 27.50 ಪಾಯಿಂಟ್‌ಗಳ ಕುಸಿತ ಕಂಡು 6,118.85 ಅಂಕಗಳಿಗೆ ತಲುಪಿದೆ.

ಬ್ಯಾಂಕಿಂಗ್, ರಿಯಲ್ಟಿ, ಉಕ್ಕು ಕ್ಷೇತ್ರದ ಶೇರುಗಳ ಮಾರಾಟಕ್ಕೆ ಹೂಡಿಕೆದಾರರು ಆಸಕ್ತಿ ತೋರಿದ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಜಪಾನ್‌ನ ನಿಕೈ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.10 ರಷ್ಟು ಇಳಿಕ ಕಂಡಿದೆ ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.20 ರಷ್ಟು ಇಳಿಕ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ