ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟು ಹಾಗೂ ದರ ಏರಿಕೆ ಕಳವಳದಿಂದಾಗಿ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 30 ಪಾಯಿಂಟ್‌ಗಳ ಕುಸಿತ ಕಂಡಿದೆ.
ಹಿಂದಿನ ದಿನದ ವಹಿವಾಟಿನಲ್ಲಿ 260 ಪಾಯಿಂಟ್‌ಗಳ ಕುಸಿತ ಕಂಡ ಬಿಎಸ್‌ಇ-30 ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 31.13 ಪಾಯಿಂಟ್‌ಗಳ ಕುಸಿತ ಕಂಡು 20,269.97 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 8.85 ಪಾಯಿಂಟ್‌ಗಳ ಏರಿಕೆ ಕಂಡು 6,070.95 ಅಂಕಗಳಿಗೆ ತಲುಪಿದೆ.
ಅಗತ್ಯ ವಸ್ತುಗಳ ದರ ಏರಿಕೆಯಿಂದಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳನ್ನು ಹೆಚ್ಚಿಸುವ ಆತಂಕದ ಹಿನ್ನೆಲೆಯಲ್ಲಿ, ಹೂಡಿಕೆದಾರರು ಲಾಭದಾಯಕ ವಹಿವಾಟಿಗೆ ಮೊರೆ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.93ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.05ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಅಮೆರಿಕದ ಡೊ ಜೊನ್ಸ್ ಕೈಗಾರಿಕೆ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.27ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.