ಲಾಭದಾಯಕ ವಹಿವಾಟು ಹಾಗೂ ಶೇರುಗಳು ಮಾರಾಟದಿಂದಾಗಿ ಶೇರುಪೇಟೆಯ ಸೂಚ್ಯಂಕ, ವಹಿವಾಟಿನ ಮುಕ್ತಾಯಕ್ಕೆ 544.80 ಪಾಯಿಂಟ್‌ಗಳ ಭಾರಿ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಹಣದುಬ್ಬರ ದರ ಏರಿಕೆಯಿಂದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಹಣದುಬ್ಬರ ನಿಯಂತ್ರಣಕ್ಕಾಗಿ, ರೆಪೋ ದರಗಳಲ್ಲಿ ಹೆಚ್ಚಳಗೊಳಿಸುವ ಆತಂಕದ ಹಿನ್ನೆಲೆಯಲ್ಲಿ, ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿಸಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಬಿಎಸ್‌ಇ-30 ಸೂಚ್ಯಂಕ ಇಂದಿನ ವಹಿವಾಟಿನ ಅಂತ್ಯಕ್ಕೆ 544.80 ಪಾಯಿಂಟ್‌ಗಳ ಕುಸಿತ ಕಂಡು 19,639.94 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ,ಇಂದಿನ ವಹಿವಾಟಿನ ಮುಕ್ತಾಯಕ್ಕೆ 159.70 ಪಾಯಿಂಟ್‌ಗಳ ಕುಸಿತ ಕಂಡು 5,888.55 ಅಂಕಗಳಿಗೆ ತಲುಪಿದೆ.
ಬಿಎಸ್‌ಇ-ಮಿಡ್‌ಕ್ಯಾಪ್ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.2.65ರಷ್ಟು ಕುಸಿತ ಕಂಡಿದೆ.ಬಿಎಸ್‌ಇ ಸ್ಮಾಲ್‌ಕ್ಯಾಪ್ ಸೂಚ್ಯಂಕ ಕೂಡಾ ಶೇ.2.98ರಷ್ಟು ಇಳಿಕೆಯಾಗಿದೆ.