ಚುನಾವಣೆ08 | ಮತಸಮರ
ಮುಖ್ಯ ಪುಟ ಸುದ್ದಿ ಜಗತ್ತು  ಚುನಾವಣೆ  ಮತಸಮರ > ಅಂಬರೀಷ್‌ಗೆ ಗಾಳ ಹಾಕುತ್ತಿರುವ ಬಿಜೆಪಿ
ಮತಸಮರ
ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವ ಮಂಡ್ಯ ಸಂಸದ ಅಂಬರೀಷ್ ಅವರನ್ನು ಸೆಳೆಯಲು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ ಎಂದು ನಿಕಟ ಮೂಲಗಳು ಹೇಳಿವೆ.

ಅಂಬರೀಷ್ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಈ ಕುರಿತು ಈಗಾಗಲೇ ಬಿಜೆಪಿ ನಾಯಕರು ಅಂಬರೀಷ್ ಅವರೊಂದಿಗೆ ಮಾತುಕತೆಯನ್ನೂ ನಡೆಸಿದ್ದು, ಶನಿವಾರ ಸಂಜೆಯೊಳಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಶನಿವಾರ ನಡೆಯಲಿರುವ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ಈ ಕುರಿತು ಸ್ಪಷ್ಟಣ ಚಿತ್ರಣ ದೊರೆಯುವ ಸಾಧ್ಯತೆಗಳಿವೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ. ಒಂದು ವೇಳೆ ಅಂಬರೀಷ್ ಇದಕ್ಕೆ ಒಪ್ಪದಿದ್ದಲ್ಲಿ, ಇಲ್ಲಿಂದ ವೈದ್ಯ ಶಿಕ್ಷಣ ಸಚಿವ ರಾಮಚಂದ್ರೇಗೌಡ ಅವರನ್ನು ಕಣಕ್ಕಿಳಿಸುವ ಕುರಿತು ಬಿಜೆಪಿ ಚಿಂತನೆ ನಡೆಸಿದೆ ಎಂದೂ ಹೇಳಲಾಗುತ್ತಿದೆ.