ಚುನಾವಣೆ08 | ಮತಸಮರ
ಮುಖ್ಯ ಪುಟ ಸುದ್ದಿ ಜಗತ್ತು  ಚುನಾವಣೆ  ಮತಸಮರ > ಕಾಂಗ್ರೆಸ್‌ಗೆ ಮರಳಿದ 'ಸಮಾಜವಾದಿ' ಬಂಗಾರಪ್ಪ
ಮತಸಮರ
ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಗೆ ಸ್ಫರ್ಧಿಸಲು ತುದಿಗಾಲಲ್ಲಿ ನಿಂತಿರುವ ಎಸ್. ಬಂಗಾರಪ್ಪ ಅವರು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಸೋನಿಯಾ ಭೇಟಿಗಾಗಿ ಮುಂಜಾನೆಯಿಂದಲೇ ಕಾದಿದ್ದ ಬಂಗಾರಪ್ಪರಿಗೆ ಸುದೀರ್ಘ ಸಮಯದ ಬಳಿಕ ಮೇಡಂ ದರ್ಶನವಾಗಿದ್ದು, ಮಾತುಕತೆ ಫಲಕಾರಿಯಾಗಿದೆ. ಅಲ್ಲದೆ ಅವರು ಕಾಂಗ್ರೆಸ್ ವತಿಯಿಂದ ಚುನಾವಣೆಗೆ ಸ್ಫರ್ಧಿಸುವುದು ಖಚಿತವಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬಂಗಾರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ತಾವು ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. "ಶಿವಮೊಗ್ಗದಲ್ಲಿ ಬಿಜೆಪಿಗೆ ಹಣಬಲವಿದ್ದರೆ, ತನಗೆ ನನಗೆ ಜನ ಬಲವಿದೆ" ಎಂದು ಹೇಳಿರುವ ಬಂಗಾರಪ್ಪ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ಇದು ಕೊನೆಯಬಾರಿ ಕಾಂಗ್ರೆಸ್‌ಗೆ ಮರಳುತ್ತಿದ್ದು, ಅವರಿನ್ನು ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕದ ಉಸ್ತುವಾರಿ ಗುಲಾಂ ನಬಿ ಅಜಾದ್ ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಬಿಜೆಪಿ ಅಭ್ಯರ್ಥಿ. ಮಾಜಿ ಮುಖ್ಯಮಂತ್ರಿಯಾಗಿರುವ ಬಂಗಾರಪ್ಪ ಈ ಕ್ಷೇತ್ರವನ್ನು ಹಲವು ಬಾರಿ ಪ್ರತಿನಿಧಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ವೇಳೆ ಶಿಕಾರಿಪುರದಿಂದ ಯಡಿಯೂರಪ್ಪ ಎದುರು ಸ್ಫರ್ಧಿಸಿ ಭಾರೀ ಮತಗಳ ಅಂತರದಿಂದ ಸೋತಿದ್ದರು. ಯುಡಿಯೂರಪ್ಪರ ಈ ಪ್ರಚಂಡ ಗೆಲುವಿನ ವ್ಯೂಹ ರಚಿಸಿದ್ದೇ ರಾಘವೇಂದ್ರ ಎಂದು ಆಗ ಹೇಳಲಾಗಿತ್ತು.