ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿರುವ ಕಾರವಾರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದ ಮೇಲೆ ಸಂಸದ ಅನಂತಕುಮಾರ್ ಹೆಗಡೆಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿ ಎಂ.ಎನ್.ವಿದ್ಯಾಶಂಕರ್ ತಿಳಿಸಿದ್ದಾರೆ.
ಮುಸ್ಲಿಮರು ಹಿಂಸೆ ನಿಲ್ಲಿಸದಿದ್ದರೆ ಈದ್ ಮಿಲಾದ್ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೆಗಡೆ ಎಚ್ಚರಿಕೆ ನೀಡಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಅಲ್ಲದೇ ಮುಸ್ಲಿಮರ ಮತಗಳ ಅಗತ್ಯ ತನಗೆ ಇಲ್ಲ ಎಂಬುದಾಗಿಯೂ ಬಹಿರಂಗ ಸಭೆಯಲ್ಲಿ ಹೇಳಿಕೆ ನೀಡಿದ್ದರು.
ಈ ಸಂಬಂಧ ಕೊಟ್ಟಿರುವ ನೋಟಿಸ್‌ಗೆ ಎರಡು ದಿನದೊಳಗೆ ಉತ್ತರೆ ನೀಡುವಂತೆ ಆಯೋಗ ಸೂಚನೆ ನೀಡಿದೆ. ಭಾರತೀಯ ದಂಡ ಸಂಹಿತೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಹೆಗಡೆ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ಆಯೋಗ ತಿಳಿಸಿದೆ.