ಚುನಾವಣೆ08 | ಮತಸಮರ
ಮುಖ್ಯ ಪುಟ ಸುದ್ದಿ ಜಗತ್ತು  ಚುನಾವಣೆ  ಮತಸಮರ > ಆಡ್ವಾಣಿ ಪ್ರಧಾನಿ ಕನಸು ನನಸಾಗದು: ಮೊಯ್ಲಿ
ಮತಸಮರ
ಲೋಕಸಭೆ ಚುನಾವಣೆ ನಂತರ ಭಾರತೀಯ ಜನತಾ ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಂಡು ನೇಪಥ್ಯಕ್ಕೆ ಸರಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯಿಲಿ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ವಾಣಿಯವರು ತಾವೇ ಭಾವಿ ಪ್ರಧಾನಮಂತ್ರಿ ಎಂದು ಸ್ವಯಂ ಘೋಷಿಸಿಕೊಳ್ಳುತ್ತಿದ್ದಾರೆ. ಆದರೆ ಅವರ ಕನಸು ಕನಸಾಗಿಯೇ ಉಳಿಯಲಿದೆ ಎಂದು ತಿಳಿಸಿದರು.

ಅಭಿವೃದ್ದಿ ಯೋಜನೆಗಳೀಗೆ ಹಣ ಬಿಡುಗಡೆ ಮಾಡುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ತಾರತಮ್ಯ ನೀತಿ ಅನುಸರಿಸುತ್ತಿದ್ದು, ಇದ್ದ ಹಣವನ್ನೆಲ್ಲಾ ಕೇವಲ ಶಿವಮೊಗ್ಗ ಜಿಲ್ಲೆಗೆ ಮಾತ್ರ ಸುರಿಯುತ್ತಿದ್ದಾರೆ. ತಮ್ಮ ಪುತ್ರನನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕೆಂಬ ಉದ್ದೇಶದಿಂದ ತಾವು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ ಎಂಬುದನ್ನೇ ಮರೆತಿದ್ದೇನೆ ಎಂದು ಕಟುವಾಗಿ ಟೀಕಿಸಿದರು.

ಕೊನೆಗಾಲದಲ್ಲಿ ಏನಾದರೂ ಸಿಗಬಹುದೆಂಬ ಆಸೆಯಿಂದ ಕಾಂಗ್ರೆಸ್‌‌ ಹಿರಿಯ ನಾಯಕರು ಬಿಜೆಪಿಗೆ ಹೋಗಿದ್ದು, ಕಾಲವೇ ಅವರಿಗೆ ತಕ್ಕಪಾಠ ಕಲಿಸಲಿದೆ ಎಂದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿ ಬಂದರೆ ಈ ಪ್ರದೇಶದಲ್ಲಿ ಕೆಂಪೇಗೌಡರ ಹಾಗೂ ಟಿಪ್ಪು ಸುಲ್ತಾನ್ ರಾಷ್ಟ್ರೀಯ ಸ್ಮಾರಕ ನಿರ್ಮಿಸುವುದಾಗಿ ಭರವಸೆ ನೀಡಿದರು.