ಚುನಾವಣೆ08 | ಮತಸಮರ | ಚುನಾವಣೆ ನಕ್ಷೆ | ಫಲಿತಾಂಶ 09
ಮುಖ್ಯ ಪುಟ ಸುದ್ದಿ ಜಗತ್ತು  ಚುನಾವಣೆ  ಮತಸಮರ > ಕಾಂಗ್ರೆಸ್-ಜೆಡಿಎಸ್ ಒಳಒಪ್ಪಂದ ವಿವರ ನೀಡಿ: ಬಿಜೆಪಿ
ಮತಸಮರ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಳ ಒಪ್ಪಂದವಾಗಿದ್ದು, ಇದರ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಆಗ್ರಹಿಸಿದ್ದಾರೆ.

ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಇಬ್ಬಗೆಯ ನೀತಿಯನ್ನು ಅನುಸರಿಸಿದೆ. ರಾಷ್ಟ್ರಮಟ್ಟದಲ್ಲಿ ತೃತೀಯ ರಂಗವನ್ನು ಬೆಂಬಲಿಸಿದರೆ, ರಾಜ್ಯದಲ್ಲಿ ಕಾಂಗ್ರೆಸ್ ಜತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಭರ್ಜರಿ ವ್ಯಾಪಾರ ನಡೆಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಮಂಗಳೂರಿನಲ್ಲಿ ಸಿಪಿಐ(ಎಂ) ಅಭ್ಯರ್ಥಿಗೆ ಮತ ಹಾಕಿ ಎಂದು ಬಹಿರಂಗವಾಗಿ ಭಾಷಣ ಮಾಡಿದರೆ, ಕಾಂಗ್ರೆಸ್‌ಗೆ ಮತ ನೀಡಿ ಎಂದು ನಿರ್ದೇಶನ ನೀಡುವ ಮೂಲಕ ಜೆಡಿಎಸ್ ಮೋಸದ ಪರಂಪರೆಯನ್ನು ಮುಂದುವರಿಸಿದೆ. ಒಂದೆಡೆ ಕಾಂಗ್ರೆಸ್‌ಗೆ ಬೆಂಬಲ ನೀಡುವ ಮೂಲಕ ಜೆಡಿಎಸ್ ತನ್ನ ಅಭ್ಯರ್ಥಿಗಳಿಗೆ ಮೋಸ ಮಾಡಿದರೆ ಮತ್ತೊಂದೆಡೆ ಕಾಮ್ರೇಡ್‌ಗಳು ರಾತ್ರಿ ಕಂಡ ಬಾವಿಯಲ್ಲಿ ಹಗಲೇ ಬಿದ್ದಂತಾಗಿದೆ ಎಂದು ಲೇವಡಿ ಮಾಡಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷದ ಕಾರ್ಯಾಧ್ಯಕ್ಷರೇ ಜೆಡಿಎಸ್‌ಗೆ ಬೆಂಬಲ ನೀಡಿದ್ದಾರೆ. ಹಾಸನದಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಕೈಕೊಟ್ಟು ಜೆಡಿಎಸ್‌ಗೆ ಬೆಂಬಲ ನೀಡಿದರು. ಕೆಲವು ಕಡೆ ಪ್ರಚಾರಕ್ಕೆ ಹೋಗಲಿಲ್ಲ. ಇದು ಜೆಡಿಎಸ್-ಕಾಂಗ್ರೆಸ್ ನಡುವಿನ ಒಳ ಒಪ್ಪಂದವಲ್ಲವೇ ಎಂದು ಪ್ರಶ್ನಿಸಿದರು.