ಚುನಾವಣೆ08 | ಮತಸಮರ | ಚುನಾವಣೆ ನಕ್ಷೆ | ಫಲಿತಾಂಶ 09
ಮುಖ್ಯ ಪುಟ ಸುದ್ದಿ ಜಗತ್ತು  ಚುನಾವಣೆ  ಮತಸಮರ > ಗೆಲುವಿನ ಹಾದಿಯಲ್ಲಿ ದೇವೇಗೌಡ-ಕುಮಾರಸ್ವಾಮಿ
ಮತಸಮರ
NRB
ಮಹಾಸಮರದ ಜನಾದೇಶದ ತೀರ್ಪಿನ ಲೆಕ್ಕಾಚಾರ ಮುಂದುವರಿದಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಸುಮಾರು 40ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಸನದಲ್ಲಿ ಸುಮಾರು 30ಸಾವಿರ ಮತಗಳಿಂದ ಮುನ್ನಡೆ ಸಾಧಿಸುವ ಮೂಲಕ ಅಪ್ಪ-ಮಗ ಗೆಲುವಿನ ಹಾದಿಯತ್ತ ಹೆಜ್ಜೆ ಹಾಕಿದ್ದಾರೆ.

ಉಳಿದಂತೆ ಭಾರೀ ಕುತೂಹಲ ಕೆರಳಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ತೀವ್ರ ಮುನ್ನಡೆ ಕಾಯ್ಡುಕೊಂಡಿದ್ದಾರೆ. ಇದರೊಂದಿಗೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ಹಿನ್ನಡೆ ಸಾಧಿಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೆಬೆಲ್ ಸ್ಟಾರ್ ಅಂಬರೀಷ್‌ ಅವರಿಗಿಂತ ಜೆಡಿಎಸ್‌ನ ಚಲುವರಾಯಸ್ವಾಮಿ ಅವರು ಸುಮಾರು 28ಸಾವಿರ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.

ಮತ್ತೊಂದು ಕುತೂಹಲ ಕೆರಳಿಸಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಬೈರೇಗೌಡ ಅವರು ಅಲ್ಪ ಮುನ್ನಡೆ ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಪಾಳಯದಲ್ಲಿ ನಡುಕ ಉಂಟಾಗಿದೆ. ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ, ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ, ಗುಲ್ಬರ್ಗಾದಲ್ಲಿ ಬಿಜೆಪಿಯ ರೇವೂ ನಾಯಕ್ ಬೆಳಮಗಿ, ಬೆಂಗಳೂರು ಕೇಂದ್ರದಲ್ಲಿ ಸಾಂಗ್ಲಿಯಾನ, ಬೆಳಗಾವಿಯಲ್ಲಿ ಬಿಜೆಪಿಯ ಸುರೇಶ್ ಅಂಗಡಿ 9.30ರ ಮತ ಎಣಿಕೆಯವರೆಗೆ ಮುನ್ನಡೆ ಸಾಧಿಸಿದ್ದಾರೆ.