ಲೋಕಸಭಾ ಚುನಾವಣೆಗಳ ಫಲಿತಾಂಶಗಳಲ್ಲಿ ಭಾರಿ ಹಿನ್ನಡೆಯ ಹಿನ್ನೆಲೆಯಲ್ಲಿ ಸೋಲೊಪ್ಪಿಕೊಂಡಿರುವ ಎಡಪಕ್ಷಗಳು, ತಮ್ಮ ಕಳಪೆ ನಿರ್ವಹಣೆಗೆ ಕಾರಣವಾಗುವ ಅಂಶಗಳ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುವುದಾಗಿ ಹೇಳಿವೆ.
ಕೇರಳ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಸಿಪಿಎಂ ಮತ್ತು ಇತರ ಎಡಪಕ್ಷಗಳು ತೀರಾ ಹಿನ್ನಡೆ ಅನುಭವಿಸಿವೆ. ಈ ಬಗ್ಗೆ ಆತ್ಮಾವಲೋಕನ ಅಗತ್ಯವಿದೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮೇ 18ರಂದು ಸಿಪಿಎಂ ಪೊಲಿಟ್ ಬ್ಯುರೋ ಸಭೆ ಸೇರಲಿದೆ ಎಂದು ಅವರು ನುಡಿದರು.
ಇನ್ನೊಂದೆಡೆ, ಬಿಜೆಪಿ ಕೂಡ ಚುನಾವಣೆಗಳಲ್ಲಿ ದಯನೀಯ ವೈಫಲ್ಯ ಅನುಭವಿಸಿದ್ದು, ಈ ಬಗ್ಗೆ ಎಲ್ಲಿ ಎಡವಿದ್ದೇವೆ ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವುದಾಗಿ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.