ಹದಿನೈದನೆ ಲೋಕಸಭಾ ಚುನಾವಣೆಯು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಉತ್ತಮ ಇಳುವರಿ ನೀಡಿದೆ. ಒಟ್ಟು 80 ಸ್ಥಾನಗಳಲ್ಲಿ ಕಾಂಗ್ರೆಸ್ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಆಡಳಿತಾರೂಢ ಬಿಎಸ್ಪಿಯು 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಅದರ ಬದ್ಧ ವೈರಿ ಸಮಾಜವಾದಿ ಪಕ್ಷ 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
PTI
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ರಾಯ್‌ಬರೇಲಿ ಕ್ಷೇತ್ರದಲ್ಲಿ, ಅವರ ಪುತ್ರ ರಾಹುಲ್ ಗಾಂಧಿ ಅಮೇಠಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿಯ ಮಿತ್ರ ಪಕ್ಷ ಆರ್ಎಲ್‌ಡಿ ಮೂರು ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ ಸ್ವತಂತ್ರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ.
NRB
ಬಿಜೆಪಿ ಅಧ್ಯಕ್ಷ ರಾಜ್‌ನಾಥ್ ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಜಯಪ್ರದಾ ಅವರುಗಳು ಜಯಭೇರಿ ಹೊಡೆದಿದ್ದಾರೆ.
ಸಮಾಜವಾದಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿಯಿಂದ ಬಹಳ ಅಂತರದ ಮತಗಳ ಮುನ್ನಡೆ ಸಾಧಿಸಿದ್ದಾರೆ.
PTI
ಫಿರೋಜಾಬಾದ್‌ನಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮುಲಾಯಂ ಪುತ್ರ ಅಖಿಲೇಶ್ ಯಾದವ್ ಅವರತ್ತ ವಿಜಯಮಾಲೆ ವಾಲಿದೆ.
PTI
ಅನೋಲ ಕ್ಷೇತ್ರದಲ್ಲಿ ಬಿಜೆಪಿ ನಾಯಕಿ ಮನೇಕಾ ಗಾಂಧಿ ತಮ್ಮ ಸಮೀಪದ ಪ್ರತಿಸ್ಫರ್ಧಿ ಧರ್ಮೇಂದ್ರ ಕುಮಾರ್ ಅವರಿಂದ ಸೋಲುಂಡಿದ್ದಾರೆ. ಆದರೆ ಆವರ ಪುತ್ರ ವರುಣ್ ಗಾಂಧಿ ಬಹಳ ಅಂತರದ ಮುನ್ನಡೆ ಸಾಧಿಸಿದ್ದಾರೆ.