ಚುನಾವಣೆ08 | ಮತಸಮರ | ಚುನಾವಣೆ ನಕ್ಷೆ | ಫಲಿತಾಂಶ 09
ಮುಖ್ಯ ಪುಟ ಸುದ್ದಿ ಜಗತ್ತು  ಚುನಾವಣೆ  ಮತಸಮರ > ರಾಮನಗರ ಕ್ಷೇತ್ರದಿಂದ ಭವಾನಿರೇವಣ್ಣ ಅಖಾಡಕ್ಕೆ?
ಮತಸಮರ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕುಟುಂಬದ ಬದ್ಧ ವೈರಿ ತೇಜಸ್ವಿನಿ ರಮೇಶ್ ವಿರುದ್ಧ ಗೆಲುವು ಸಾಧಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರದಲ್ಲಿ ಮಂತ್ರಿಗಿರಿಗಾಗಿ ಪೈಪೋಟಿ ನಡೆಸುತ್ತಿದ್ದರೆ ಮತ್ತೊಂದೆಡೆ ಸಂಸದರಾಗಿ ಆಯ್ಕೆಯಾಗಿರುವುದರಿಂದ ತೆರವಾಗುತ್ತಿರುವ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಅವರು ಸ್ಪರ್ಧಿಸಲಿದ್ದಾರೆ ಎಂಬು ಮಾತುಗಳು ಕೇಳಿಬರತೊಡಗಿದೆ.

ಕುಮಾರಸ್ವಾಮಿ ಸಂಸತ್‌ಗೆ ಪ್ರವೇಶ ಪಡೆಯುತ್ತಿರುವ ಬೆನ್ನಲ್ಲೇ, ರಾಮನಗರ ಕ್ಷೇತ್ರದಿಂದ ಭವಾನಿ ರೇವಣ್ಣ ಅವರನ್ನೇ ಅಖಾಡಕ್ಕಿಳಿಸಲು ಜೆಡಿಎಸ್ ಮುಖಂಡರು ಸಮಾಲೋಚನೆ ನಡೆಸುತ್ತಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ವಿಧಾನಸಭೆ ಚುನಾವಣೆಯಲ್ಲಿ ಪತಿ ರೇವಣ್ಣ, ಲೋಕಸಭೆ ಚುನಾವಣೆಯಲ್ಲಿ ಮಾವ ದೇವೇಗೌಡರ ಗೆಲುವಿಗೆ ಶ್ರಮಿಸಿದ ಭವಾನಿ ವಿಧಾನಸಭೆಗೆ ಪ್ರವೇಶಿಸುವ ತಯಾರಿಯಲ್ಲಿದ್ದಾರೆ. ಈಗಾಗಲೇ ಕುಮಾರಸ್ವಾಮಿ ಪತ್ನಿ ಅನಿತಾಕುಮಾರಸ್ವಾಮಿ ಶಾಸಕಿಯಾಗಿದ್ದಾರೆ. ಇದೀಗ ದೇವೇಗೌಡ ಕುಟುಂಬದ ಮತ್ತೊಬ್ಬ ಸೊಸೆ ರಾಜಕೀಯ ಅಖಾಡಕ್ಕೆ ಇಳಿಯುವ ಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ.