ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ಪ್ರಚಲಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನಗರ ಸಭೆಯಿಂದ ಮುಖ್ಯಮಂತ್ರಿ ಗಾದಿಯವರೆಗೆ...  Search similar articles
ಸದಾ ಹೋರಾಟದ ಹಾದಿಯನ್ನೇ ತುಳಿಯುತ್ತ, ರೈತರ ಸಂಕಷ್ಟಗಳಿಗೆ ಧ್ವನಿಯಾಗುತ್ತ ಬಂದ ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪನವರ ನಡೆದು ಬಂದ ಹಾದಿ ಅವರನ್ನು ಇಂದು ನಾಡಿನ ಮುಖ್ಯಮಂತ್ರಿಯನ್ನಾಗಿಸಿದೆ. ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ತಮ್ಮ ಕಂಚಿನ ಕಂಠದಿಂದ ನಾಡಿನ ಜನತೆಗಾಗುವ ಅನ್ಯಾಯವನ್ನು ನಿರ್ಭಯವಾಗಿ ಹೇಳುತ್ತಿದ್ದ ಯಡಿಯೂರಪ್ಪನವರ ಸ್ವಭಾವ ಅನೇಕ ರಾಜಕಾರಣಿಗಳಿಗೆ ಇಷ್ಟವಾಗುತ್ತಿರಲಿಲ್ಲ. ಕಂಡದ್ದನ್ನು ನೇರವಾಗಿ ಹೇಳುವ ಇವರ ಜಾಯಮಾನದಿಂದ ಇವರಿಗೆ ಮುಂಗೋಪಿ ಎಂಬ ಪಟ್ಟವು ಲಭಿಸಿತ್ತು. ಆದರೆ ಯಡಿಯೂರಪ್ಪನವರದ್ದು ನ್ಯಾಯಪರ ಹೋರಾಟ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 48 ದಿನಗಳ ಕಾಲ ಜೈಲುವಾಸವನ್ನೂ ಅನುಭವಿಸಿದ್ದರು.

ಬಿಎ ಪದವಿ ಪೂರೈಸಿದ ನಂತರ ಇವರು ಆರ್ಎಸ್ಎಸ್ ಸಂಘಟನೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡರು. ನಂತರ ಸ್ಥಳೀಯ ಪಂಚಾಯತ್ ಅಧ್ಯಕ್ಷರಾಗಿ ಸಾಕಷ್ಟು ಉತ್ತಮ ಕೆಲಸ ಮಾಡಿದರು. 1983ರಲ್ಲಿ ಮೊದಲ ಬಾರಿಗೆ ಶಿಕಾರಿಪುರದಿಂದ ಶಾಸಕರಾಗಿ ಆಯ್ಕೆಯಾದಾಗ ಅವರೊಬ್ಬ ಪ್ರಭಾವಿ ನಾಯಕರಾಗುತ್ತಾರೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದರು. ಅಂದಿನಿಂದ ಇಂದಿನವರೆಗೂ ಅದೇ ಕ್ಷೇತ್ರವನ್ನು ಆರಿಸಿಕೊಂಡಿರುವ ಯಡಿಯೂರಪ್ಪ ಜನತೆಯ ಮೇಲೆ ಅಪಾರ ನಂಬಿಕೆ ಇಟ್ಟಿದ್ದಾರೆ. ಆ ನಂಬಿಕೆಯನ್ನು ಅಲ್ಲಿನ ಜನತೆಯೂ ಹುಸಿಗೊಳಿಸಿಲ್ಲ.

1967ರಲ್ಲಿ 25 ತರುಣರಾಗಿದ್ದ ಯಡಿಯೂರಪ್ಪ ಅವರನ್ನು ವರಿಸಿದ ಮೈತ್ರಾದೇವಿ, ಪತಿಯ ಎಲ್ಲ ಸುಖ ದುಃಖಗಳಲ್ಲಿ ಸಮಭಾಗಿಯಾಗಿದ್ದರು. ಯಡಿಯೂರಪ್ಪ ಇಟ್ಟಂತಹ ಎಲ್ಲಾ ಯಶಸ್ವಿ ಹೆಜ್ಜೆಗಳಿಗೆ ಮೆಟ್ಟಿಲಾಗಿ ನಿಂತರು. ಪತ್ನಿಯ ಪ್ರೋತ್ಸಾಹದಿಂದ 1972ರಲ್ಲಿ ಮೊದಲ ಬಾರಿಗೆ ತಾಲೂಕು ಜನ ಸಂಘದ ಅಧ್ಯಕ್ಷರಾಗಿ ಆಯ್ಕೆಯಗುವ ಮೂಲಕ ಸಾರ್ವಜನಿಕ ಸೇವೆಗೆ ಪಾದಾರ್ಪಣೆ ಮಾಡಿದರು. 1975ರಲ್ಲಿ ತುರ್ತು ಪರಿಸ್ಥಿತಿಯ ದಿನಗಳಲ್ಲಿ ಯಡಿಯೂರಪ್ಪ ಮನೆ ತೊರೆದು ಭೂಗತವಾಗಿದ್ದರು. ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟವನ್ನು ಜೀವಂತವಾಗಿಡಲು ಪೊಲೀಸರ ಕಣ್ಣು ತಪ್ಪಿಸಿ ರಾತ್ರಿ ವೇಳೆ ಹಳ್ಳಿ ಹಳ್ಳಿಗೆ ಸಂಚರಿಸುತ್ತಿದ್ದರು.

ಸಕ್ರಿಯ ರಾಜಕಾರಣದಲ್ಲಿ ಭಾಗಿಯಾಗಿದ್ದ ಯಡಿಯೂರಪ್ಪನವರು ದೇಶಸೇವೆಗೆ ತಮ್ಮನ್ನು ಮುಡಿಪಾಗಿಟ್ಟಿದ್ದಾರೆ. ಸೂಕ್ತ ಸಮಯದಲ್ಲಿ ಅಧಿಕಾರವನ್ನು ಹಿಡಿದಿರುವ ಯಡಿಯೂರಪ್ಪ ಪಕ್ಷೇತರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮಗೆ ದೊರೆತ ಐದು ವರ್ಷದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ದಿ ಕೊಂಡೊಯ್ದರೆ, ಅದರ ಯಶಸ್ಸು ಯಡಿಯೂರಪ್ಪನವರಿಗೆ ಸಲ್ಲುತ್ತದೆ.
ವೀಡಿಯೋ ವೀಕ್ಷಿಸಿ
ಮತ್ತಷ್ಟು
ಗೆದ್ದ ಮತದಾರ; ಸೋತ ಕುತಂತ್ರ
ಪ್ರೇಮ, ಕಾಮ, ಆಡಂಬರ: ನರಕವಾಗುತ್ತಿದೆ ನಗರ
ಪ್ರಶ್ನೆ ನಿಮ್ಮದು, ಉತ್ತರ ನಿಮ್ಮದು!
ಮಹಿಳಾ ಮೀಸಲು ಮಸೂದೆ: ನಡೆದು ಬಂದ ಹಾದಿ
ಸುಡು ಬೇಸಿಗೆ: ಜನಸಾಮಾನ್ಯನಿಗೆ ಹಣದುಬ್ಬರದ ಬೇಗೆ
ಪಶ್ಚಿಮಘಟ್ಟದ ಜನರ ತೂಗುವ ಸೇತುವೆ