ಅವಿನಾಶ್ ಬಿ. PTI ಇವನ್ನು ನೀವು ತಿಪ್ಪರಲಾಗ ಅನ್ನಿ, ಬಡಬಡಿಕೆ ಅನ್ನಿ, ಎಡಬಿಡಂಗಿತನ ಅನ್ನಿ. ಎಲ್ಲದಕ್ಕೂ ಉದಾಹರಣೆಗಳಾಗಿ ನಿಲ್ಲುತ್ತವೆ ಮುಂಬಯಿ ಮೇಲಿನ ಭಯೋತ್ಪಾದನಾ ದಾಳಿಯ ನಂತರ ನೆರೆಯ ಪಾಕಿಸ್ತಾನದಿಂದ ಹೊರಬರುತ್ತಿರುವ ಹೇಳಿಕೆಗಳು.ಮುಂಬಯಿ ದಾಳಿ ಪಾಕಿನಿಂದ ಕ್ಷಣ ಕ್ಷಣಕ್ಕೂ ಹೊರಬೀಳುತ್ತಿರುವ ಹೇಳಿಕೆಗಳನ್ನು ಗಮನಿಸಿದಲ್ಲಿ ಅಲ್ಲಿ ಏನಾಗುತ್ತಿದೆ? ಆ ದೇಶವನ್ನು ಯಾರು ನಿಯಂತ್ರಿಸುತ್ತಿದ್ದಾರೆ ಎಂಬುದಕ್ಕೆ ನಿಖರ ಉತ್ತರ ದೊರೆಯಬಹುದು. ಅಲ್ಲಿಯ ಸರಕಾರವು ಉಗ್ರವಾದದ ಕೈಗೊಂಬೆಯಾಗಿಬಿಟ್ಟಿದೆಯೇ? ಸರಕಾರವನ್ನು ಪಾಕಿಸ್ತಾನದ ಐಎಸ್ಐ ಮತ್ತು ಸೇನೆ ನಿಯಂತ್ರಿಸುತ್ತಿದೆಯೇ?