ಫೆಬ್ರವರಿ 15ರ ಮೊದಲು ಚುನಾವಣೆಯನ್ನು ನಡೆಸಲಾಗುವುದು ಮತ್ತು ಸೇನಾ ಮುಖ್ಯಸ್ಥನ ಹುದ್ದೆಯನ್ನು ಬಿಡಲಿದ್ದೇನೆ ಎಂದು ಪಾಕಿಸ್ತಾನದ ಅಧ್ಯಕ್ಷ ಪರ್ವೇಜ್ ಮುಷರಫ್ ಭರವಸೆ ನೀಡಿದ್ದಾರೆ.
ತುರ್ತು ಪರಿಸ್ಥಿತಿಯನ್ನು ತೆಗೆದುಹಾಕುವಂತೆ ಜಾರ್ಜ್ ಬುಷ್ ಒತ್ತಾಯಿಸಿದ ಕೆಲವೇ ಗಂಟೆಗಳಲ್ಲಿ ಮುಷರಫ್‌ರಿಂದ ಈ ಪ್ರತಿಕ್ರಿಯೆ ಬಂದಿದೆ.
ಸೇನಾಡಳಿತ ವಿರುದ್ಧ ಪಾಕಿಸ್ತಾನದಾದ್ಯಂತ ಕೋಪ ಹೆಚ್ಚುತ್ತಿದ್ದು, ಅಂತಾರಾಷ್ಟ್ರೀಯ ಸಹಕಾರ ಪುನವಿಮರ್ಶೆಗೆ ಒಳಪಡುತ್ತಿರುವ ಹಿನ್ನೆಲೆಯಲ್ಲಿ ಮುಷರಫ್ ಭಾರಿ ಒತ್ತಡಕ್ಕೊಳಗಾಗಿದ್ದಾರೆ. ಅದಾಗ್ಯೂ ಮುಷರಫ್, ಸೇನಾ ಮುಖ್ಯಸ್ಥನ ಸ್ಥಾನವನ್ನು ಬಿಡುವ ನಿರ್ದಿಷ್ಟ ದಿನಾಂಕವನ್ನು ನೀಡಲಿಲ್ಲ.
"ಸಾರ್ವತ್ರಿಕ ಚುನಾವಣೆ ಮುಂದಿನ ವರ್ಷದ ಫೆಬ್ರವರಿ 15ರ ವೇಳೆಗೆ ನಡೆಸಲಾಗುವುದು" ಎಂಬ ಮುಷರಫ್ ಉಲ್ಲೇಖವನ್ನು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮಿತಿ ಸಭೆಯ ನಂತರ ಅವರು, ತಾನು ಪ್ರಮಾಣ ವಚನ ಸ್ವೀಕರಿಸಿದ ನಂತರ ಸೇನಾ ಮುಖ್ಯಸ್ಥನ ಸ್ಥಾನವನ್ನು ಬಿಡಲಿದ್ದೇನೆ ಎಂದು ತಿಳಿಸಿದ್ದಾರೆ.
ಪಾಕಿಸ್ತಾನದಲ್ಲಿನ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬುಷ್ ಮುಷರಫ್‌ಗೆ ಕರೆ ಮಾಡಿ, ತುರ್ತು ಪರಿಸ್ಥಿತಿಯನ್ನು ಹಿಂಪಡೆಯುವಂತೆ ಹಾಗು ನಿಗದಿಯಂತೆ ಚುನಾವಣೆ ನಡೆಸಲು ಮತ್ತು ಸೇನಾ ಮುಖ್ಯಸ್ಥನ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದರು.
|